ग्रन्थनाम [Book Name] - ಕೀರ್ತಿನಾಥ ಕುರ್ತಕೋಟಿ ಅವರ ಆಯ್ದ ಬರಹಗಳು
[Keertinatha Kurtakoti Avara Aayda Barahagalu]
लेखकः [Author] - के.वी. सुब्बन्ना [K V Subbanna]
प्रकाशकः [Publisher] - अक्षरा प्रकाशनम् [Akshara Prakashana]
भाषा [Language] - कन्नड [ಕನ್ನಡ]
विचारः [Topic] -
आकारः [Size] पुटाः [Pages] -
ग्रन्थविवरणम् [Description] - ಕನ್ನಡ ಸಾಹಿತ್ಯವನ್ನು ಪ್ರವೇಶಿಸಬಯಸುವ ಹೊಸ ಓದುಗರಿಗೆ ಕನ್ನಡದ ಪ್ರಮುಖ ಲೇಖಕರ ಆಯ್ದ ಬರಹಗಳ ಕಿರುವಾಚಿಕೆಗಳು ಲಭ್ಯವಾಗಬೇಕು -- ಎಂಬ ಉದ್ದೇಶವಿಟ್ಟುಕೊಂಡು ಅಕ್ಷರ ಪ್ರಕಾಶನವು ಈ ಪುಸ್ತಕಮಾಲಿಕೆಯನ್ನು ಆರಂಭಿಸಿದೆ. ತಲಾ ೧೦೮ ಪುಟಗಳ ಈ ಪುಸ್ತಕಗಳಲ್ಲಿ -- ಆಧುನಿಕಪೂರ್ವ ಕನ್ನಡದ ಮಹತ್ಕೃತಿಗಳೂ (ಟಿಪ್ಪಣಿಗಳೊಂದಿಗೆ) ಹಾಗೂ ಹೊಸಗನ್ನಡದ ಪ್ರಮುಖ ಲೇಖಕರ ಆಯ್ದ ಕಥೆ-ಕವನ-ಪ್ರಬಂಧಗಳೂ ಮತ್ತು ಕೆಲವು ಕನ್ನಡೇತರ ಲೇಖಕರ ಆಯ್ದ ಬರಹಗಳ ಸಂಗ್ರಹಗಳೂ ಸೇರಿವೆ. ಆಯಾ ಲೇಖಕರನ್ನು ಮೊದಲ ಬಾರಿಗೆ ಪರಿಚಯಿಸಿಕೊಳ್ಳುವವರಿಗೆ ಉಪಯುಕ್ತವಾಗುವಂತೆ ಈ ಪುಸ್ತಕಗಳ ವಸ್ತು- ವಿನ್ಯಾಸಗಳನ್ನು ರೂಪಿಸಲಾಗಿದೆ. ಮಾರುಕಟ್ಟೆಗೆ ಬಿಡುಗಡೆಯಾಗುವ ಜತೆಗೆ, ಈ ಮಾಲಿಕೆಯ ಪುಸ್ತಕಗಳನ್ನು ನೀನಾಸಮ್ ಪ್ರತಿಷ್ಠಾನವು ನಡೆಸುತ್ತಿರುವ ಸಾಹಿತ್ಯ ಅಧ್ಯಯನ ಶಿಬಿರಗಳಲ್ಲಿ ಪಠ್ಯಗಳಾಗಿಯೂ ಬಳಸಲಾಗುತ್ತದೆ.
ಅಕ್ಷರ ಪ್ರಕಾಶನಕ್ಕೆ ೫೦ ತುಂಬಿದ ೨೦೦೬ನೆಯ ವರ್ಷ, ದಿ| ಕೆ.ವಿ. ಸುಬ್ಬಣ್ಣನವರ ನೆನಪಿಗೆ, ಈ ಹೊಸ ಪುಸ್ತಕಮಾಲೆಯ ಮೊದಲ ಕಂತಿನ ೨೫ ಪುಸ್ತಕಗಳು ಬಿಡುಗಡೆಗೊಂಡವು; ೨೦೦೭ರಲ್ಲಿ ಎರಡನೆಯ ಕಂತಿನ ಇನ್ನೂ ೧೦ ಪುಸ್ತಕಗಳು ಮತ್ತು ೨೦೦೯ರಲ್ಲಿ ಇನ್ನೂ ೧೫ -- ಹೀಗೆ ಒಟ್ಟು ೫೦ ಪುಸ್ತಕಗಳು ಈವರೆಗೆ ಈ ಮಾಲಿಕೆಯಲ್ಲಿ ಪ್ರಕಟಗೊಂಡಿವೆ.